ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಭೂಕುಸಿತ ಸಂಭವಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಲಘು ವಾಹನಗಳನ್ನು ಮಾತ್ರ ಓಡಿಸಲು ಅನುಮತಿಸಲಾಗಿದೆ.
ಸುಮಾರು ಒಂದು ತಿಂಗಳಿನಿಂದ ನಿರಂತರವಾಗಿ ಸುರಿದ ಮಳೆಗೆ ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಬಣಕಲ್ ಠಾಣೆ ಪೊಲೀಸರು ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದಿದ್ದಾರೆ.
ಕೊಟ್ಟಿಗೆಹಾರದಿಂದ ವಾಹನಗಳನ್ನ ವಾಪಸ್ ಕಳಿಸುತ್ತಿರುವ ಪೊಲೀಸರು, ಜೆಸಿಬಿ ಯಂತ್ರದ ಮೂಲಕ ಮಣ್ಣು ತೆರವು ಕಾರ್ಯ ನಡೆಸುತ್ತಿದ್ದಾರೆ.
ಮಳೆ ಮುಂದುವರಿದರೆ ತೆರವು ಕೆಲಸ ಕಷ್ಟವಾಗಲಿದ್ದು, ರಸ್ತೆ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.