ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್‌ನ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್, ಬಲ್ಲಿಯಾ, ಪ್ರವೀಣ್ ಕುಮಾರ್ ಲಕ್ಷ್ಯಕರ್ ಘಟನೆಯ ಕುರಿತು ಮಾಹಿತಿ ಹಂಚಿಕೊಂಡರು, “ಶಾಲಾ ಮಕ್ಕಳ ಪಿಕ್ ಅಪ್ ವ್ಯಾನ್ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಫೆಫ್ನಾ ಪೊಲೀಸ್ ವ್ಯಾಪ್ತಿಯ ಕಪುರಿ ನಾರಾಯಣಪುರ ಬಳಿ ಇಂದು ಮುಂಜಾನೆ ನಡೆದಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮೂರ್ನಾಲ್ಕು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ ವಿದ್ಯಾರ್ಥಿಗಳು ಪಿಕಪ್ ವ್ಯಾನ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಏಕಾಏಕಿ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.