ಮೈಕ್ ಸ್ವಿಚ್ ಆಫ್ ಆರೋಪ: ಪಿಐಬಿ ಫ್ಯಾಕ್ಟ್‌ ಚೆಕ್‌ ಮೂಲಕ ಮಮತಾ ಬ್ಯಾನರ್ಜಿ ಸುಳ್ಳು ಬಹಿರಂಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀತಿ ಆಯೋಗದ ಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪ ಸುಳ್ಳು ಎಂದು ಪಿಐಬಿ ಫ್ಯಾಕ್ಟ್‌ ಚೆಕ್‌ (PIB Fact Check) ಹೇಳಿದೆ.

ಪಿಐಬಿ ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಸಭೆಯಲ್ಲಿ ಏನಾಯ್ತು ಎಂಬುದನ್ನು ವಿವರಿಸಿದೆ.

ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತನ್ನ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ತಪ್ಪು ಹೇಳಿಕೆಯಾಗಿದೆ. ವರ್ಣಮಾಲೆಯ ಪ್ರಕಾರ ಮಮತಾ ಬ್ಯಾನರ್ಜಿ ಅವರಿಗೆ ಮಧ್ಯಾಹ್ನದ ನಂತರ ಮಾತನಾಡಲು ಅವಕಾಶ ನೀಡಲಾಗಿತ್ತು. ಆದರೆ ಪಶ್ಚಿಮ ಬಂಗಳಾದ ಮುಖ್ಯಮಂತ್ರಿ ಕಚೇರಿಯ ಮನವಿಯ ಮೇರೆಗೆ 7ನೇಯವರಾಗಿ ಮಾತನಾಡಲು ಸೂಚಿಸಲಾಗಿತ್ತು. ಅವರು ಮಾತನಾಡುವ ಸಮಯ ಮಗಿದಿದೆ ಎಂದು ಗಡಿಯಾರ ತೋರಿಸಿತ್ತು. ಆದರೆ ಯಾವುದೇ ಬೆಲ್‌ ಬಾರಿಸಿಲ್ಲ ಎಂದು ಹೇಳಿದೆ.

ಪಶ್ಚಿಮ ಬಂಗಾಳಕ್ಕೆ ಬರಬೇಕಿದ್ದ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ನಿರಾಕರಿಸಿದ ವಿಷಯವನ್ನು ಪ್ರಸ್ತಾಪಿಸಿದಾಗ ತಮ್ಮ ಮೈಕ್ ಅನ್ನು ಮ್ಯೂಟ್ ಮಾಡಲಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿದ್ದ ನೀತಿ ಆಯೋಗದ ಸಭೆಯಿಂದ ಹೊರ ನಡೆದಿದ್ದರು.

https://x.com/PIBFactCheck/status/1817107837333757990?ref_src=twsrc%5Etfw%7Ctwcamp%5Etweetembed%7Ctwterm%5E1817107839514739197%7Ctwgr%5Ee9942b26c722bb05f7c6f334ea251410a49a845d%7Ctwcon%5Es2_&ref_url=https%3A%2F%2Fpublictv.in%2Fmamata-banerjee-claims-mic-muted-during-key-meet-pib-fact-checks%2F

ನನಗೂ ಮೊದಲು ಮಾತನಾಡಿದ ಸಿಎಂಗಳಿಗೆ 20 ನಿಮಿಷಕ್ಕೆ ಸಮಯ ನೀಡಲಾಗಿತ್ತು. ನನ್ನ ಸರದಿಯಲ್ಲಿ ಕೇವಲ ಐದು ನಿಮಿಷ ನೀಡಲಾಯಿತು. ನೆರವು ನಿರಾಕರಿಸಿದ ವಿಷಯ ಪ್ರಸ್ತಾಪಿಸಿದ್ದಂತೆ ಮೈಕ್ ಮ್ಯೂಟ್ ಮಾಡಲಾಗಿತ್ತು ಎಂದು ಮಮತಾ ಆರೋಪಿಸಿದ್ದರು.

ರಾಷ್ಟ್ರಪತಿ ಭವನದ ಸಾಂಸ್ಕೃತಿನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಭಾಗಿಯಾಗಿದ್ದರು.

ತಮಿಳುನಾಡು, ಕರ್ನಾಟಕ, ಕೇರಳ, ದೆಹಲಿ,‌ ತೆಲಂಗಾಣ, ಪಂಜಾಬ್ ಸಿಎಂಗಳು ಮೊದಲೇ ಸಭೆಯನ್ನು ಬಹಿಷ್ಕರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. INDIA ಒಕ್ಕೂಟದ ಎಲ್ಲಾ ನಾಯಕರು ಮತ್ತು ಈ ಒಕ್ಕೂಟದ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳೂ ಇಂತಹದೇ ವಂಚನೆಗಳಿಂದ ಮತದಾರರ ಹಾದಿ ತಪ್ಪಿಸುವ ಮತ್ತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕುಕೃತ್ಯಗಳಿಂದ ಮತ್ತು
    ವೃತ್ತಿ ಆದರ್ಶವನ್ನು ಹರಾಜಿಗಿಟ್ಟಿರುವ ಮಾಧ್ಯಮಗಳ ಸಹಕಾರದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರುವ ಹೊಲಸು ಹಾದಿಯಲ್ಲಿ ಮುಂದುವರೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here

error: Content is protected !!