ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಾಟಾ ಸುಮೋ ಕಾರೊಂದು ಕಣಿವೆಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಜಮ್ಮು-ಕಾಶ್ಮೀರದ ದಕ್ಸುಮ್ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಣಿವೆಗೆ ಉರುಳಿದೆ ಎಂಬುದಾಗಿ ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ .
ದಕ್ಸುಮ್ ಪ್ರದೇಶದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಆರ್ಶುನ್ ಹಟ್ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.