ಹೊಸ ದಿಗಂತ ವರದಿ, ಯಲ್ಲಾಪುರ :
ತಾಲೂಕಿನ ಮಾಗೋಡ್ ಫಾಲ್ಸ್ ಗೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಕಿರು ಸೇತುವೆ ಕುಸಿತ ಉಂಟಾಗಿದ್ದು, ರಸ್ತೆ ಸಂಚಾರ ಬಂದ್ ಆಗಿದೆ.
ಭೂ ಕುಸಿತ ಉಂಟಾಗಿರುವ ಸ್ಥಳಕ್ಕೆ ನೋಡಲ್ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಪಂಚಾಯತ್ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ರಸ್ತೆ ಕುಸಿತ ಉಂಟಾಗಿರುವ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮಾಗೋಡ್ ಫಾಲ್ಸ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಎಚ್ಚರಿಕೆ ಫಲಕ ಅಳವಡಿಸಲಾಗಿದ್ದು, ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.