ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಗೆಲುವಿಗೆ 214 ರನ್ ಬೃಹತ್ ಗುರಿ ನೀಡಿದೆ.
ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ 7 ವಿಕೆಟ್ ನಷ್ಟಕ್ಕೆ 213 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.
ಭಾರತದ ಪರ ಆರಂಭಿಕರಾದ ಯಶಸ್ವಿ ಜೈಸ್ವಾಲ್ (40 ರನ್), ಶುಭ್ ಮನ್ ಗಿಲ್ (34 ರನ್) ಉತ್ತಮ ಆರಂಭ ನೀಡಿದರು.
ಬಳಿಕ ನಾಯಕ ಸೂರ್ಯ ಕುಮಾರ್ ಯಾದವ್ ಉತ್ತಮ ಬ್ಯಾಟಿಂಗ್ ನಡೆಸಿ ಅರ್ಧಶತಕ ಸಿಡಿಸಿದರು. ರಿಷಬ್ ಪಂತ್ 49 ರನ್ ಭಾರತದ ಇನ್ನಿಂಗ್ಸ್ ಕೊನೆಯ ಹಂತದಲ್ಲಿ ವಿಕೆಟ್ ಒಪ್ಪಿಸಿ ಅರ್ಧಶತಕ ಮಿಸ್ ಮಾಡಿಕೊಂಡರು. ಹಾರ್ದಿಕ್ ಪಾಂಡ್ಯ 9 ರನ್ ಗಳಿಸಿ ಮತ್ತೆ ನಿರಾಶೆ ಮೂಡಿಸಿದರೆ, ಉದಯೋನ್ಮುಖ ಆಟಗಾರ ರಿಯಾನ್ ಪರಾಗ್ 7 ರನ್ ಗಳಿಸಿ ಔಟಾದರು. ಅಂತಿಮ ಓವರ್ ನಲ್ಲಿ 1 ರನ್ ಗಳಿಸಿದ್ದ ರಿಂಕು ಸಿಂಗ್ ಫರ್ನಾಂಡೋ ಗೆ ವಿಕೆಟ್ ಒಪ್ಪಿಸಿದರು.