ಮಂಗಳೂರಿನಲ್ಲಿ ಕೊರಗಜ್ಜಗೆ ಕೋಲ ಸೇವೆ ಸಲ್ಲಿಸಿದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ

ಹೊಸ ದಿಗಂತ ವರದಿ,ಮಂಗಳೂರು :

ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತಮ್ಮ ಸಂಕಷ್ಟ ಪರಿಹಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತೊಕ್ಕೊಟ್ಟಿನ ಕೊರಗಜ್ಜನ ಕಟ್ಟೆಯಲ್ಲಿ ಶನಿವಾರ ರಾತ್ರಿ ಕೋಲ ಸೇವೆ ನಡೆಸಿದ್ದು, ಕುಟುಂಬಸ್ಥರು ಭಾಗಿ ಆಗಿದ್ದಾರೆ.

ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಗ್ರ್ಯಾಂಡ್ ಸಿಟಿ ವಾಣಿಜ್ಯ ಮಳಿಗೆಯ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್ಟೆಯಲ್ಲಿ ವಿನಯ್ ಕುಲಕರ್ಣಿ ಕುಟುಂಬ ಸಮೇತರಾಗಿ ಕೋಲ ಸೇವೆಯಲ್ಲಿ ಪಾಲ್ಗೊಂಡರು.

ಈ ವೇಳೆ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಸಹೋದರ ಇಫ್ತಿಕಾರ್ ಆಲಿ ಸಾಥ್ ನೀಡಿದ್ದಾರೆ.

ವಿದಾನಸಭಾ ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಮಂಗಳೂರಿನ ಕಾಂಗ್ರೆಸ್ ನ ಸ್ನೇಹಿತರು ಹೇಳಿದ್ದರು.ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ ಎಂದು ವಿನಯ್ ಕುಲಕರ್ಣಿ ಹೇಳಿದರು.

ಬಿಜೆಪಿ ಜಿ.ಪಂ ಸದಸ್ಯ ಯೋಗೇಶ ಗೌಡ ಗೌಡರ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯವು ಧಾರವಾಡ ಗ್ರಾಮಾಂತರ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಕುಲಕರ್ಣಿ ಭರ್ಜರಿ ಮತಗಳ ಅಂತರಗಳಿಂದ ಗೆದ್ದಿದ್ದರು.

ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು,ಶಾಸಕರಾದರೂ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಈಗಲೂ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ನಡೆಯಲಿದೆ ಎಂದು ಮಾಹಿತಿ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿನಯ್ ಕುಲಕರ್ಣಿ ಅವರು ಸಂಕಷ್ಟ ನಿವಾರಣೆಗಾಗಿ ತೊಕ್ಕೊಟ್ಟಿನಲ್ಲಿ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!