ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ದೆಹಲಿಯ ಓಲ್ಡ್ ರಾಜೇಂದ್ರ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ಕೋಪಗೊಂಡ ವಿದ್ಯಾರ್ಥಿಗಳು ಇನ್‌ಸ್ಟಿಟ್ಯೂಟ್ ಹೊರಗೆ ಪ್ರತಿಭಟನೆ ನಡೆಸಿದರು, ಇನ್ನೂ ಕೂಡ ಪ್ರತಿಭಟನೆ ಮುಂದುವರಿಸಿದ್ದಾರೆ.
ಇಂದು ಬೆಳಿಗ್ಗೆ, ಐಎಎಸ್ ಸ್ಟಡಿ ಸರ್ಕಲ್‌ನ ಹೊರಗಿನ ರಸ್ತೆಯಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡು, ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ.