ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ವಿಜಯ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಅವರು ಹುಣಸೂರು ಕ್ಷೇತ್ರದ ಶಾಸಕ ಆಗಿದ್ದರು ಮತ್ತು ಮೈಸೂರಿನ ಸಂಸದರೂ ಆಗಿದ್ದರು. ಸಿ.ಎಚ್.ವಿಜಯ್ ಶಂಕರ್ ಅವರು ರಾಣೆ ಬೆನ್ನೂರು ಮೂಲದವರಾಗಿದ್ದು, 1994ರಿಂದ 1998ರವರೆಗೆ ಹುಣಸೂರು ಕ್ಷೇತ್ರದ ಶಾಸಕರಾಗಿದ್ದರು.
ನಂತರ 1998 ಮತ್ತು 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಸೇವೆ ಸಲ್ಲಿಸಿದ್ದರು. 2010ರಿಂದ 2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಮತ್ತು 2010 ರಲ್ಲಿ ಕರ್ನಾಟಕದ ಕ್ಯಾಬಿನೆಟ್ ಸಚಿವರಾಗಿದ್ದರು.