ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಸಂಪುಟ ಸಹೋದ್ಯೋಗಿಗಳಿಗೆ ಡಿಕೆ ಶಿವಕುಮಾರ್ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!