ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದಿಂದ ಬೆಂಗಳೂರಿಗೆ ಬಂದ್ದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ.
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು.