ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆಯೇ ‘ಕಲ್ಕಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ ಚಿತ್ರತಂಡಕ್ಕೆ ನಟಿ ಸಾಥ್ ನೀಡಿದ್ದರು.
ಇದೀಗ ಹುಟ್ಟುವ ಮಗುವಿಗಾಗಿ ನಟಿ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.
ಅಂತಾರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸನ್ ಆಫರ್ ನಟಿ ದೀಪಿಕಾಗೆ ಸಿಕ್ಕಿತ್ತು. ಆದರೆ, ಪ್ರೆಗ್ನೆಂಟ್ ಎಂಬ ಕಾರಣಕ್ಕೆ ಅವರು ಅದನ್ನು ನಿರಾಕರಿಸಿದ್ದಾರಂತೆ. ಮಗುವನ್ನು ನೋಡಿಕೊಳ್ಳಲು ನಟಿ ಈ ಪ್ರಾಜೆಕ್ಟ್ ಅನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ದೀಪಿಕಾ ಯಾವುದೇ ಹೊಸ ಪ್ರಾಜೆಕ್ಟ್ಗೆ ಸಹಿ ಹಾಕುತ್ತಿಲ್ಲ ಎನ್ನಲಾಗಿದೆ
ದೀಪಿಕಾ ಯಾರ ಸಹಾಯವೂ ಇಲ್ಲದೆ ಮಗುವನ್ನು ನೋಡಿಕೊಳ್ಳಲು ಬಯಸಿದ್ದಾರೆ. ಅಂದರೆ ಇತರ ಸೆಲೆಬ್ರಿಟಿಗಳಂತೆ ದೀಪಿಕಾ ಮಗುವನ್ನು ನೋಡಿಕೊಳ್ಳಲು ದಾದಿಯರನ್ನು ನೇಮಿಸಿಕೊಳ್ಳುವುದಿಲ್ಲ. ಹೆರಿಗೆಯ ನಂತರ ಮಗುವಿನ ಪಾಲನೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧಾರಿಸಿದ್ದಾರೆ. ಆ ನಂತರ ಮತ್ತೆ ಸಿನಿಮಾಗೆ ಬರುವ ಬಗ್ಗೆ ಆಲೋಚಿಸಲಿದ್ದಾರೆ.