ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 3 ರಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಮೈಸೂರಿನಲ್ಲಿ ಆ.10ರಂದು ಪಾದಯಾತ್ರೆ ಸಮಾರೋಪ ಸಮಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಜೆಡಿಎಸ್ ನಾಯಕರ ಸಭೆಯ ಬಳಿಕ ಬಿವೈ ವಿಜಯೇಂದ್ರ ಮಾತನಾಡಿ, ಮುಂದಿನ ಶನಿವಾರ ಆಗಸ್ಟ್ 3ರಂದು ನಮ್ಮ ಪಾದಯಾತ್ರೆ ಆರಂಭವಾಗುತ್ತದೆ.ಈ ಒಂದು ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರದ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಎಲ್ಲ ಬಿಜೆಪಿ , ಜೆಡಿಎಸ್ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇದೆ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, ಬೆಂಗಳೂರಿನಿಂದ ಮೈಸೂರಿನ ವರೆಗೆ ಮುಡಾ ಹಗರಣಕ್ಕೆ ಸಂಬಂಧಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ನಡೆಸಲಾಗುತ್ತದೆ. ಸಾವಿರಾರು ಜನ ಸೇರಿ ದೊಡ್ಡ ಹೋರಾಟವನ್ನು ಕೈಗೊಂಡಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೋಗಬೇಕಾದರೆ ಒಂದು ವಾರ ಬೇಕಾಗುತ್ತದೆ. ಹಾಗಾಗಿ ಆಗಸ್ಟ್ 10ರಂದು ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
Bari prati bhatane madi kond iddre janagala kasttakke yaru spandana madoru adra jote idu irabeku