ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಯಾರ್ಕ್ನ ರೋಚೆಸ್ಟರ್ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದ, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಈ ದಾಳಿಯಲ್ಲಿ 6 ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಸಂಜೆ ರೋಚೆಸ್ಟರ್‌ನ ಮ್ಯಾಪಲ್‌ವುಡ್ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
20 ವರ್ಷದ ಯುವಕನಿಗೆ ಗುಂಡು ಹಾರಿಸಲಾಯಿತು, ಘಟನೆಯ ಸಮಯದಲ್ಲಿ ಇನ್ನೊಬ್ಬ ವ್ಯಕ್ತಿಗೆ ಮಾರಣಾಂತಿಕ ಗಾಯಗಳಾಗಿವೆ, ಇದು ಸಂಜೆ 6:20 ರ ಸುಮಾರಿಗೆ ಸಂಭವಿಸಿದೆ ಎಂದು ರೋಚೆಸ್ಟರ್ ಪೋಲೀಸ್ ತಿಳಿಸಿದ್ದಾರೆ.
ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಕ್‌ನಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಜನರು ಚೆಲ್ಲಾಪಿಲ್ಲಿಯಾಗಿ ಓಡಲು ಶುರುಮಾಡಿದರು. ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತರ ಸಂಖ್ಯೆ ಅಥವಾ ಮೃತರದ ಬಗ್ಗೆ ಪೊಲೀಸರು ಇನ್ನೂ ವಿವರಗಳನ್ನು ಬಿಡುಗಡೆ ಮಾಡಿಲ್ಲ.