ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್ಎಸ್ನಿಂದ ಒಂದೂವರೆ ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಸಿದ್ದರಿಂದ ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಹೊಗೆನಕಲ್ನಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ.
ಹೊಗೆನಕಲ್ ಮೂಲಕ ಕಾವೇರಿ ನೀರು ಮೆಟ್ಟೂರು ಡ್ಯಾಂ ಸೇರುತ್ತಿದ್ದಾಳೆ. ನೀರಿನ ರಭಸಕ್ಕೆ ಕಲ್ಲು, ಗುಡ್ಡ, ಜಲಪಾತಗಳು ಕೂಡ ಮುಳುಗಡೆಯಾಗಿವೆ. ಈ ಹಿನ್ನೆಲೆ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಮುನ್ನೆಚ್ಚರಿಕೆ ಕ್ರಮವಾಗಿ ಹೊಗೆನಕಲ್ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ನೀರು ರಭಸವಾಗಿ ಹರಿಯುತ್ತಿರುವ ಹಿನ್ನಲೆ ಜಲಪಾತಗಳು ಕಣ್ಮರೆಯಾಗಿವೆ. ಕರ್ನಾಟಕ ಅಷ್ಟೇ ಅಲ್ಲದೇ ತಮಿಳುನಾಡಿನಲ್ಲೂಕೂಡ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ಹೊಗೆನಕಲ್ನತ್ತ ಬರುವ ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಡೆದು ವಾಪಸ್ ಕಳುಹಿಸುತ್ತಿದ್ದಾರೆ.