ತರುಣ್ ಸುಧೀರ್ -ಸೋನಾಲ್ ವಿವಾಹಕ್ಕೆ ಸೂಪರ್ ಪ್ಲಾನ್: ರೆಡಿಯಾಯಿತು ಪರಿಸರ ಸ್ನೇಹಿ ಇನ್ವಿಟೇಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ.

ನಿರ್ದೇಶಕ ತರುಣ್ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸೂಪರ್ ಆಗಿಯೇ ಪ್ಲಾನ್ ಮಾಡಿದ್ದಾರೆ. ಸಾಮಾನ್ಯವಾಗಿ ಸೆಲಬ್ರೆಟಿಗಳು ಇನ್ವಿಟೇಷನ್ ಜೊತೆ ಒಂದು ಗಿಡಕೊಟ್ಟು ತಮ್ಮ ವಿವಾಹಕ್ಕೆ ಕರೆಯುವುದು ಕಾಮನ್ .ಆದರೆ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಕಂಪ್ಲೀಟ್ ಆಗಿ ಪರಿಸರ ಸ್ನೇಹಿಯಾಗಿ ಮಾಡಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಆಗಸ್ಟ್ 10 ಹಾಗೂ 11 ರಂದು ನಡೆಯಲಿರುವ ತರುಣ್ ಮತ್ತು ಸೋನಾಲ್ ಮದುವೆಗೆ ಈಗಾಗಲೇ ಸಕಲ ಸಿದ್ದತೆಗಳು ನಡೆದಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!