ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಮುಂಜಾನೆ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 19 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ. ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ.
ಭಾರೀ ಭೂಕುಸಿತದ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ.
Horrible visuals of landslide coming in from Meppadi, Wayanad.#Wayanad #Landslide #Kerala pic.twitter.com/4DHZYV7Ciu
— West Coast Weatherman (@RainTracker) July 30, 2024