January14, 2026
Wednesday, January 14, 2026
spot_img

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿಯಿಂದ TDB ಮಾಜಿ ಸದಸ್ಯನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಬುಧವಾರ TDB ಮಾಜಿ ಸದಸ್ಯ ಕೆಪಿ ಶಂಕರ ದಾಸ್ ಅವರನ್ನು ಬಂಧಿಸಿದೆ.

ದೇವಸ್ಥಾನದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಮೇಲಿನ ಚಿನ್ನದ ಲೇಪನ ಕಳವಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಮಾಜಿ ತಿರುವಾಂಕೂರು ದೇವಸ್ವಂ ಬೋರ್ಡ್ (TDB) ಸದಸ್ಯನನ್ನು ಕೇರಳದ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಿಂದ ಬಂಧಿಸಲಾಗಿದೆ.

ಈ ಪ್ರಕರಣಗಳಲ್ಲಿ ದಾಸ್ ಅವರನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಕೇರಳ ಹೈಕೋರ್ಟ್ ಪ್ರಶ್ನಿಸಿದ ಬೆನ್ನಲ್ಲೇ ಅವರ ಬಂಧನವಾಗಿದೆ. ದಾಸ್ ಎರಡು ಪ್ರಕರಣಗಳಲ್ಲಿ ಬಂಧಿತರಾದ 12ನೇ ವ್ಯಕ್ತಿಯಾಗಿದ್ದಾರೆ.

ಇತ್ತೀಚಿಗೆ ದೇವಾಲಯದ ಪ್ರಧಾನ ಅರ್ಚಕ ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಕಂದರಾರು ರಾಜೀವರನ್ನು ಎಸ್ ಐಟಿ ಬಂಧಿಸಿತ್ತು.

Most Read

error: Content is protected !!