Wednesday, September 10, 2025

ಮತ್ತೆ ಒಂದಾದ ನಟ ಅಜೇಯ್ ರಾವ್ ದಂಪತಿ: ನಮ್ಮ ದಾಂಪತ್ಯ ಜೀವನ ನಡೆಸಲು ನಿರ್ಧರಿಸಿದ ಸಪ್ನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನ ನಟ ಅಜಯ್ ರಾವ್ ಅವರ ಪತ್ನಿ ಸಪ್ನ ಮತ್ತೆ ಹೊಂದಾಣಿಕೆ ಜೀವನ ನಡೆಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಶನಿವಾರ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ, ಗೌರವ ಮತ್ತು ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ತೀವ್ರವಾಗಿ ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಪ್ರಿಯ ಸ್ನೇಹಿತರೇ ಮತ್ತು ಸಹೋದರರೇ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ನಿರ್ಮಿಸಿಕೊಳ್ಳಲು ಮತ್ತು ನಮ್ಮ ದಾಂಪತ್ಯ ಜೀವನವನ್ನು ಪುನಃ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆಗಳು ಮತ್ತು ಪ್ರಾರ್ಥನೆಗಳನ್ನು ನಿಮ್ಮಲಿ ಕೇಳಿಕೊಳ್ಳುತ್ತಿದೇನೆ ಮತ್ತು ನಾನು ಅತ್ಯಂತ ಗೌರವದಿಂದ ತಿಳಿಸಲು ಬಯಸುವುದೇನೆಂದರೆ, ಈ ವಿಷಯವು ನಮ್ಮ ವೈಯಕ್ತಿಕ, ಆಳವಾದ ಭಾವನಾತ್ಮಕ ಮತ್ತು ದಾಂಪತ್ಯ ಜೀವನಕ್ಕೆ ಮಾತ್ರ ಸಂಬಂಧಿಸಿದ್ದು ಹೊರತು ಬೇರೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ತಿಳಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

2014ರಲ್ಲಿ ಡಿಸೆಂಬರ್ 18ರಲ್ಲಿ ಪ್ರೀತಿಸಿ ಮದ್ವೆಯಾಗಿದ್ದ ಈ ಜೋಡಿ ಇತ್ತೀಚಿಗೆ ಹೊಸ ಮನೆಯ ಗೃಹ ಪ್ರವೇಶ ಮಾಡಿತ್ತು. ಹೊಸಪೇಟೆಯಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಆದರೆ ಶನಿವಾರ ಅಜಯ್ ರಾವ್ ಪತ್ನಿ ಸಪ್ನ ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ