ಕೊಡಗಿನ ಪ್ರವಾಸಿ ತಾಣಗಳಿಗೆ 2 ದಿನ ಪ್ರವೇಶ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಸದ್ಯ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಈ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ ಮಾಡಲಾಗಿದೆ. ಯಾರೂ ಪ್ರವಾಸಕ್ಕೆ ಆಗಮಿಸಬೇಡಿ ಎಂದು ಹೇಳಲಾಗಿದೆ.

ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳು ಬುಧ ಮತ್ತು ಗುರುವಾರ ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!