ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆತನ ಪರ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಈ ಹಿನ್ನೆಲೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎ1 ಪುನೀತ್ ಕೆರೆಹಳ್ಳಿ , ಎ2 ಪ್ರತಾಪ್ ಸಿಂಹ ಎಂದು ಉಲ್ಲೇಖಿಸಲಾಗಿದೆ. ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್​ಐಆರ್​ ದಾಖಲಿಸಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಜೈಪುರದಿಂದ ಬಂದಿದ್ದ ಲೋಡ್​ಗಟ್ಟಲೇ ಬಾಕ್ಸ್​ಗಳಲ್ಲಿ ನಾಯಿ ಮಾಂಸ ಇದೆ ಎಂದು ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಈ ಹಿನ್ನಲೆ ರಸ್ತೆಯಲ್ಲಿ ಗಲಾಟೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ 2ಕೇಸ್ ಹಾಕಿ ಅರೆಸ್ಟ್ ಮಾಡಿದ್ದರು.

ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ಹಲ್ಲೆ ಮಾಡಿದ್ದಾರೆ ಎಂದು ಅವರ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಅವರ ಬಳಿ ದೂರು ನೀಡಿದ್ದರು. ಜೊತೆಗೆ ಕೆಲವು ಪೊಲೀಸರು ಹೀರೋಗಳಾಗುವುದಕ್ಕೆ ಇತರ ಮಾಡುತ್ತಾರೆ. ಇಂತಹ ಘಟನೆ ಆಗಬಾರದು ಎಂದು ಮನವರಿಕೆ ಮಾಡಲು ಬಂದಿದ್ದೇವೆ ಪೊಲೀಸರ ವಿರುದ್ದ ಕಿಡಿಕಾರಿದ್ದರು. ಇದೀಗ ಪುನೀತ್ ಕೆರೆಹಳ್ಳಿ, ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ದ ಎಫ್​ಐಆರ್​ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!