ಅಧಿಕಾರಾವಧಿ ಮುಗಿಯುವ ಮೊದಲೇ ರಾಜ್ಯಸಭಾ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಜೆಡಿ ನಾಯಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ಅಧಿಕಾರಾವಧಿ ಮುಗಿಯುವ ಮೊದಲೇ ಬಿಜೆಡಿ ನಾಯಕಿ ಮಮತಾ ಮೊಹಾಂತ ಇಂದು ರಾಜ್ಯಸಭಾ ಸದಸ್ಯೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ರಾಜೀನಾಮೆ ಪತ್ರ ಸ್ವೀಕರಿಸಿರುವುದಾಗಿ ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ತಿಳಿಸಿದ್ದಾರೆ.

‘ಮಮತಾ ಮೊಹಾಂತ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಮತ್ತು ವೈಯಕ್ತಿಕವಾಗಿ ನನಗೆ ಹಸ್ತಾಂತರಿಸಿದ್ದಾರೆ. ಅದು ಸಾಂವಿಧಾನಿಕವಾಗಿ ಕ್ರಮಬದ್ಧವಾಗಿದೆ ಎಂದು ನಾನು ಕಂಡುಕೊಂಡಿದ್ದೇನೆ. ಒಡಿಶಾ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಸಭಾ ಸದಸ್ಯೆ ಮಮತಾ ಮೊಹಾಂತ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದೇನೆ’ ಎಂದು ಹೇಳಿದ್ದಾರೆ.

ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಮತಾ ಮೊಹಾಂತಾ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಇಂದು ತಿಳಿಸಿವೆ.

ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಮಮತಾ ಮೊಹಾಂತಾ ರಾಜೀನಾಮೆಯ ನಂತರ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!