ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯನಾಡಿನಲ್ಲಿ ಭೂಕುಸಿತ ಸಂಭವಿಸಿ ನೂರಾರು ಮಂದಿ ಪ್ರಾಣಹಾನಿಯಾಗಿದ್ದು, ಇದೀಗ ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದೆ.
ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. 20 ಮಂದಿ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಲ್ಲಿ ಶಿಮ್ಲಾದಿಂದ 100 ಕಿಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಉಂಟಾಗಿದೆ.
ಎನ್ಡಿಆರ್ಎಫ್ ತಂಡಗಳನ್ನೂ ಸ್ಥಳಕ್ಕೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಎನ್ಡಿಎಸ್ಆರ್ಎಫ್ ತಂಡ, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತೆರಳಿದೆ. ಮೇಘ ಸಿಡಿತದಿಂದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.