January15, 2026
Thursday, January 15, 2026
spot_img

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ.

ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು.

ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಸಿದ್ದರಾಮನಂದ ಸ್ವಾಮೀಜಿ ಸಕ್ರಿಯರಾಗಿದ್ದರು. ಜನವರಿ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಅವರು ಸ್ವತಃ ನಡೆಸಿಕೊಟ್ಟಿದ್ದರು.

ಕಳೆದ 2023 ಮತ್ತು 2024ರಲ್ಲಿ ಇದೇ ಮಠದ ಉತ್ಸವಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ಗಣ್ಯರೊಂದಿಗೆ ಗುರುಪೀಠದ ಆತ್ಮೀಯ ಸಂಪರ್ಕ ಇತ್ತು.

Most Read

error: Content is protected !!