ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಂತೆ ಕೆಲಸ ಮಾಡುತ್ತಿರುವುದು ಖಂಡನೀಯ. ಸಂವಿಧಾನವನ್ನು ಎತ್ತಿ ಹಿಡಿದು ಪಕ್ಷಾತೀತವಾಗಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡುವುದು ರಾಜ್ಯಪಾಲರ ಕರ್ತವ್ಯ. ಆದರೆ ಅನಗತ್ಯವಾದ ಕೆಲವು ಮೂರ್ಖ ವಿಚಾರದಲ್ಲಿ ಸಿಎಂಗೆ ನೋಟಿಸ್ ನೀಡಿದ್ದಾರೆ.
ಭಾರತದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಬಿಜೆಪಿಯೇತರ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ರಾಜ್ಯಪಾಲರು ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.