ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, ಈ ಸಂಖ್ಯೆ ಹೆಚ್ಚಾಗಲಿವೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಭೂಕುಸಿತಗಳಿಗೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಮೃತಪಟ್ಟಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಎಚ್ಚರಿಕೆಯನ್ನು ತಜ್ಞರು ಮತ್ತು ಭೂವಿಜ್ಞಾನಿಗಳು ನೀಡಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕರ್ನಾಟಕದಲ್ಲಿ ಭೂಕುಸಿತಕ್ಕೆ ಒಳಗಾಗುವ ತಾಲ್ಲೂಕುಗಳ ಪಟ್ಟಿ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ.
ಜಿಲ್ಲಾಡಳಿತಗಳು ನೀಡಿದ ಮಾಹಿತಿ ಆಧಾರದ ಮೇಲೆ ಡೇಟಾವನ್ನು ಒಟ್ಟುಗೂಡಿಸಲಾಗಿದ್ದು, ಭೂಕುಸಿತದ ಘಟನೆಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಎರಡೂ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ.