ಹೊಸದಿಗಂತ ಡಿಜಿಟಲ್ ಡೆಸ್ಕ್:
10 ಕೋಟಿ ರೂ. ಮೌಲ್ಯದ ಕೊಕೈನ್ ಡ್ರಗ್ಸ್ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಬೆಂಗಳೂರು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.
ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ.
ಈ ಮಹಿಳೆ ಜುಲೈ 26ರಂದು ದುಬೈನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈಕೆಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಕೊಕೈನ್ ಅನ್ನು ಕಳ್ಳ ಸಾಗಾಣೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾಳೆ.