January15, 2026
Thursday, January 15, 2026
spot_img

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡ ಮೇಲೆ ಎರಡು ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ.

ಮತ್ತೊಂದೆಡೆ ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಜೆಡಿಎಸ್ ವತಿಯಿಂದ ದೂರು ನೀಡಲಾಗಿದೆ. ಹೀಗಾಗಿ 2 ಎಫ್‌ಐಆರ್‌ಗಳು ದಾಖಲಾಗಿವೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಇದ್ದರೂ ಅಲ್ಲಿ ದರ್ಬಾರ್ ನಡೆಸಲು ರಾಜೀವ್ ಗೌಡ ಯತ್ನಿಸುತ್ತಿದ್ದಾರೆ. ಯಾರೇ ಅಧಿಕಾರಿಗಳು ಬಂದರೂ ತಮ್ಮ ಸಮ್ಮತಿ ಪಡೆಯುವಂತೆ ಒತ್ತಡ ಹೇರುತ್ತಿದ್ದರು. ವಿವಿಧ ಇಲಾಖೆಗಳಲ್ಲಿ ತಮ್ಮದೇ ಮಾತು ನಡೆಯಬೇಕು ಎಂದು ಒತ್ತಡ ಹೇಳುತ್ತಿದ್ದರು ಎಂಬ ಆರೋಪಗಳು ಕೂಡ ಈಗ ಕೇಳಿ ಬಂದಿವೆ.

Most Read

error: Content is protected !!