ಹೊಸದಿಗಂತ ವರದಿ ಪುತ್ತೂರು:
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ.
ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದ್ದು, ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.