ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದ ಶಾಲೆಯೊಂದಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯ ಇಮೇಲ್ ಬಂದಿದೆ.
ಬಾಂಬ್ ಬೆದರಿಕೆ ಇರುವ ಇಮೇಲ್ ಬಂದ ನಂತರ ಗ್ರೇಟರ್ ಕೈಲಾಶ್ ಪ್ರದೇಶದ ಶಾಲೆಯನ್ನು ಪರಿಶೀಲಿಸಿದ್ದು, ತನಿಖೆ ನಡೆಯುತ್ತಿದೆ.
ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದ ಶಾಲೆಯೊಂದಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆಯ ಇಮೇಲ್ ಬಂದಿತ್ತು. ನಿನ್ನೆ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ಇದುವರೆಗಿನ ತನಿಖೆಯಲ್ಲಿ ಏನೂ ಪತ್ತೆಯಾಗಿಲ್ಲ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗಿದೆ.