ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲಿವುಡ್ ನಟ ಕಮಲ್ ಹಾಸನ್ ಅವರ ಹಿರಿಯ ಸಹೋದರ ಚಾರು ಹಾಸನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಚಾರು ಹಾಸನ್ ಅವರ ಹಿರಿಯ ಮಗಳು ನಟಿ ಸುಹಾಸಿನಿ ಅವರ ತಂದೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಟಿ ಸುಹಾಸಿನಿ ಅವರು ತಮ್ಮ ತಂದೆಯನ್ನು ಅಪ್ಪಿಕೊಂಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನೀವು ಇದನ್ನು ನನ್ನ ತಂದೆಗೆ ವೈದ್ಯಕೀಯ ವಾಸ್ತವ್ಯ ಎಂದು ಕರೆಯುತ್ತೀರಾ? ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ಮತ್ತು ಪುತ್ರಿಯರ ಪ್ರೀತಿ ಮತ್ತು ಕಾಳಜಿಯಿಂದ ಅವರು ಚೇತರಿಸಿಕೊಳ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.
91 ವರ್ಷದ ಚಾರು ಹಾಸನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇದೀಗ ಚೇತರಿಸಿಕೊಳ್ತಿದ್ದಾರೆ.