ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸೇರಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಲು ನಿರ್ಧರಿಸಿದೆ ಎಂದರು.
ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.
ಕೆಲ ದಿನಗಳ ಹಿಂದೆಯಷ್ಟೇ ಮಾತನಾಡಿದ್ದ ಪರಮೇಶ್ವರ್, ಪಾದಯಾತ್ರೆಗೆ ನಾವು ಅನುಮತಿ ನೀಡುತ್ತಿಲ್ಲ, ಅವರೇ ಮಾಡಲಿ, ಈ ವಿಚಾರದಲ್ಲಿ ನಮ್ಮ ತಕರಾರು ಇಲ್ಲ ಎಂದರು. ಆದರೆ, ನಾವು ಅಧಿಕೃತ ಪೊಲೀಸ್ ಪ್ರಾಧಿಕಾರದಿಂದ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದರು. ಈಗ ಯೂಟರ್ನ್ ಹೊಡೆದಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.