January15, 2026
Thursday, January 15, 2026
spot_img

ಕಾಶಿ ಚಂದ್ರಮೌಳೇಶ್ವರ ಗರ್ಭಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ಸ್ಪರ್ಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026 ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಇಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ ಗರ್ಭ ಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.

ಪ್ರತಿ ವರ್ಷ ಸಂಕ್ರಾಂತಿ ದಿನದಂದು ಸೂರ್ಯ ರಶ್ಮಿ ಇಲ್ಲಿನ ಶಿವಲಿಂಗದ ಮೇಲೆ ಬೀಳುವ ಪ್ರತೀತಿ ಇದೆ. ಅದೇ ರೀತಿ ಇಂದು ಬೆಳಗ್ಗೆ 7:50ರ ವೇಳೆಯಲ್ಲಿ ಸೂರ್ಯರಶ್ಮಿ ಶಿವಲಿಂಗದ ಮೇಲೆ ಬಿದ್ದಿದೆ.

ಸೂರ್ಯ ರಶ್ಮಿ ಶಿವಲಿಂಗದ ಮೇಲೆ ಬೀಳುತ್ತಿದ್ದಂತೆ ಕಾಶಿ ಚಂದ್ರಮೌಳೇಶ್ವರಸ್ಚಾಮಿಗೆ ವಿವಿಧ ಅಭಿಷೇಕ ಮಾಡಿ ವಿಶೇಷ ಪೂಜೆಯನ್ನು ಚಂದ್ರನ ಆಶ್ರಮದ ಪೀಠಾಧ್ಯಕ್ಷ ಮಹಾಂತ ಶಿವಯೋಗಿ ಸ್ವಾಮೀಜಿ ನೆರವೇರಿಸಿದರು. ಈ ವಿಶೇಷ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾಗಿದ್ದಾರೆ.

Most Read

error: Content is protected !!