ಪಿಎಸ್ಐ ಪರಶುರಾಮ ಸಾವು: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಿಎಸ್ಐ ಪರಶುರಾಮ ಸಾವು ಖಂಡಿಸಿ ಕಲಬುರಗಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಯಿಮ್ಸ್ ಎದುರಿರುವ ರಾಷ್ಟ್ರೀಯ ಹೆದ್ದಾರಿ-150 ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ಯಾದಗಿರಿಯ ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಘಟನೆ ನಡೆದು 18 ಗಂಟೆ ಕಳೆದರೂ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿಲ್ಲ. ಪೊಲೀಸ್ ಅಧಿಕಾರಿಗೆ ಅನ್ಯಾಯ ಆದರೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ಕಿಲೋ ಮೀಟರ್​ ಅಧಿಕ ದೂರ ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ, ಮಗ, ಮಾವ, ತಂದೆ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!