ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂತು. ಆದರೆ ಸಿದ್ದರಾಮಯ್ಯ ಸರಕಾರ ಅಹಿಂದ ವರ್ಗಕ್ಕೆ ದ್ರೋಹ ಬಗೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿದೆ.
ತುಳಿತಕ್ಕೊಳಗಾದವರಿಗೆ ನ್ಯಾಯ ದೊರಕಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ವೆಬ್ ಸೈಟ್ ಹಗರಣ, ಎಸ್ ಸಿಪಿ, ಟಿಎಸ್ ಪಿ ಹಣ ದುರುಪಯೋಗ ಖಂಡಿಸಿ ಮೈಸೂರಿನಲ್ಲಿ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.