ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45 ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ.
ರಾಜ್ಯದ ಕುಲ್ಲು, ಮಂಡಿ ಹಾಗೂ ಶಿಮ್ಲಾ ಜಿಲ್ಲೆಗಳಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಹಲವು ಮನೆಗಳು, ಸೇತುವೆಗಳು ಕೊಚ್ಚಿ ಹೋಗಿವೆ. ಈ ಜಿಲ್ಲೆಗಳಲ್ಲಿನ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಕುಲ್ಲು ಜಿಲ್ಲೆಯ ಮಣಿಕರಣ್ನಲ್ಲಿರುವ ಮಲಾನಾ ವಿದ್ಯುತ್ ಯೋಜನೆ ಸ್ಥಳದಲ್ಲಿ ಸಿಲುಕಿದ್ದ 33 ಜನರನ್ನು ರಕ್ಷಣೆ ಮಾಡಲಾಗಿದೆ. ಮಳೆಯಿಂದಾಗಿ ಸ್ಥಳದಲ್ಲಿ ಗೋಡೆ ಮತ್ತು ಸುರಂಗ ಮಾರ್ಗಕ್ಕೆ ಹಾನಿಯಾಗಿದ್ದು, ನೀರು ನುಗ್ಗಿದೆ. ಆದರೂ ಸೇನೆ, ಎನ್ಡಿಆರ್ಎಫ್ ಸಿಬ್ಬಂದಿ ಜನರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.