ದಿಗಂತ ವರದಿ ಮಡಿಕೇರಿ:
ನೀರಗಂಟಿಯೊಬ್ಬರು ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಒಳಗಾದ ಘಟನೆ ಸುಂಟಿಕೊಪ್ಪ ಸಮೀಪದ ಅಂದಗೋವೆ ಪೈಸಾರಿಯಲ್ಲಿ ನಡೆದಿದೆ.
ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಅಂದಗೋವೆ ಪೈಸಾರಿ ನಿವಾಸಿ, ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ನೀರುಗಂಟಿ(ವಾಟರ್ ಮ್ಯಾನ್) ಹುಸೇನ್ ಎಂಬವರೇ ಕಾಡಾನೆ ದಾಳಿಗೆ ಒಳಗಾದವರಾಗಿದ್ದು,ಕೈ ಹಾಗೂ ಕಾಲಿಗೆ ಸಣ್ಣಪುಟ್ಟ ಗಾಯಗೊಂಡ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶನಿವಾರ ಬೆಳಗ್ಗೆ 6ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.