ದಿಗಂತ ವರದಿ ಕೊಪ್ಪಳ:
ರಾಜ್ಯದಲ್ಲಿ 1985 ರಿಂದ ಸರ್ಕಾರಿ ನೌಕರರ ವರ್ಗಾವಣೆ ಅವ್ಯವತವಾಗಿ ನಡೆಯುತ್ತಿದ್ದು, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾರ್ಗಸೂಚಿ ಸಿದ್ದಪಡಿಸಲಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ಅವ್ಯವತವಾಗಿ ಎಲ್ಲ ಸರ್ಕಾರದಲ್ಲಿ ನಡೆದಿದೆ. ಇದನ್ನು ತಪ್ಪಿಸಲು ನಮ್ಮ ಸರ್ಕಾರ ಮಟ್ಟಹಾಕಲು ಪ್ರಯತ್ನಗಳು ನಡೆಯುತ್ತಿವೆ ಎಂದರು. ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕೆ.ರಾಜಶೇಖರ ಹಿಟ್ನಾಳ್ ಇದ್ದರು.