ರಾಮನಗರದ ಬಿಡದಿ ತಲುಪಿದ ಬಿಜೆಪಿ- ಜೆಡಿಎಸ್ ಪಾದಯಾತ್ರೆ: ಸಾವಿರಾರು ಕಾರ್ಯಕರ್ತರು ನೀಡಿದ್ರು ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನೇತೃತ್ವದ ಬೃಹತ್ ಪಾದಯಾತ್ರೆಗೆ ಇಂದು ಬೆಳಗ್ಗೆ ಪಾದಯಾತ್ರೆಗೆ ಚಾಲನೆ ನೀಡಲಾಗಿದ್ದು, ಇದೀಗ ಸಾವಿರಾರು ಕಾರ್ಯಕರ್ತರೊಂದಿಗೆ ರಾಮನಗರ ತಾಲೂಕಿನ ಬಿಡದಿಯನ್ನು ತಲುಪಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್ ಅವರು, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ವಿರೋಧ ಪಕ್ಷ ಉಪ ನಾಯಕರಾದ ಅರವಿಂದ್ ಬೆಲ್ಲದ್, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಅಶ್ವಥ್ ನಾರಾಯಣ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ ಬಿ ಸುರೇಶ್ ಬಾಬು, ಮಾಜಿ ಸಚಿವರಾದ ಬಿ ಶ್ರೀರಾಮುಲು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಭೈರತಿ ಬಸವರಾಜು, ರಾಜು ಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರ ಸ್ವಾಮಿ, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಸಂಸದರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!