ಹೊಸದಿಗಂತ ವರದಿ, ಅಂಕೋಲಾ:
ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾದ ಜಗನ್ನಾಥ್ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರಲ್ಲದೆ, ಕುಟುಂಬದ ಸದಸ್ಯರಲ್ಲಿ ಒಬ್ಬರಿಗೆ ನೌಕರಿ ನೀಡುವ ಹಾಗೂ ಸ್ಥಳೀಯ ಶಾಸಕರಿಗೆ ಹೇಳಿ ಮನೆ ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿ, ವೈಯಕ್ತಿಕ ೧.೫ ಲಕ್ಷ ರೂ. ಧನ ಸಹಾಯ ನೀಡಿದರು.