ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಇಂದಿನಿಂದ ಆರಂಭಿಸಿದ್ದ ಪಾದಯಾತ್ರೆಯ ಮೊದಲ ದಿನದ ಯಾತ್ರೆ ಇದೀಗ ಮುಕ್ತಾಯವಾಗಿದೆ. ಮೊದಲ ದಿನವೇ ನಾಯಕರು 16 ಕಿ.ಮೀ ಪಾದಯಾತ್ರೆ ನಡೆಸಿದರು. ಬಿಡದಿಯಲ್ಲಿ ಪಾದಯಾತ್ರೆ ಅಂತ್ಯವಾಗಿದ್ದು, ಇಂದು ರಾತ್ರಿ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ವಾಸ್ತವ್ಯ ಹೂಡಲಿದ್ದಾರೆ.
ಮಂಜುನಾಥ ಕನ್ವೆನ್ಷನ್ ಹಾಲ್ನಲ್ಲಿ ಕಾರ್ಯಕರ್ತರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬಿಡದಿಯಲ್ಲಿ ಮೊದಲ ದಿನದ ಪಾದಯಾತ್ರೆ ಅಂತ್ಯಕ್ಕೂ ಮುನ್ನ ಸಭೆ ಮಾಡಲಾಗಿದೆ. ತೆರೆದ ವಾಹನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಸಾರ್ವಜನಿಕ ಭಾಷಣ ಮಾಡಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅಂತಾ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಇಂದಿನಿಂದ ಪಾದಯಾತ್ರೆ ಆರಂಭಿಸಿದ್ದು,ಬೆಂಗಳೂರಿನ ಕೆಂಗೇರಿಯಲ್ಲಿರೋ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ದೋಸ್ತಿ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ.