ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಆಗ್ರಾ-ಲಖನೌ ಹೆದ್ದಾರಿಯಲ್ಲಿ ಕಾರಿಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ.
ರಾಯ್ ಬರೇಲಿಯಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಇಟಾವಾ ಎಸ್ಎಸ್ಪಿ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಬಸ್ಸಿನಲ್ಲಿದ್ದ 60 ಪ್ರಯಾಣಿಕರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ರಿಂದ 25 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಮೂವರು ಸಹ ಸಾವನ್ನಪ್ಪಿದ್ದಾರೆ. ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಆಗ್ರಾದಿಂದ ಲಕ್ನೋಗೆ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಯ ಮಧ್ಯದಲ್ಲಿ ಡಿವೈಡ್ ಅನ್ನು ದಾಟಿ ರಸ್ತೆಯ ರಾಂಗ್ ಸೈಡ್ಗೆ ಚಲಿಸಿದೆ.
ನಂತರ ನಿಯಂತ್ರಣ ತಪ್ಪಿದ ಕಾರು ಡಬಲ್ ಡೆಕ್ಕರ್ ಬಸ್ ಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಿಂದ ಸುಮಾರು 20 ಅಡಿ ಕೆಳಗೆ ಬಸ್ ಬಿದ್ದಿದೆ. ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.