ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಭಾರಿ ಮಳೆಗೆ ಗುಡ್ಡ ಕುಸಿತ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಪ್ರವಾಹದ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಬ ದೇವಸ್ಥಾನದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶೃಂಗೇರಿಯಲ್ಲಿ ಒಂದೆಡೆ ಗುಡ್ಡ ಕುಸಿಯುತ್ತಿದ್ದರೆ, ಇನ್ನೊಂದೆಡೆ ಪ್ರವಾಹ ಭೀತಿ ಎದುರಾಗಿದೆ. ಶೃಂಗೇರಿ ಶಾರದಾಂಬ ದೇವಸ್ಥಾನ ಪ್ರದೇಶದಲ್ಲಿ ನೆರೆ ಭೀತಿ ಹೆಚ್ಚಾಗಿದೆ. ತುಂಗಾ ನದಿ ಅಪಾಯದ ಮಟ್ಟ ದಾಟುತ್ತಿದ್ದು, ಶೃಂಗೇರಿ ಶಾರದಾಂಬ ದೇವಸ್ಥಾನದ ಸುತ್ತಮುತ್ತ ಕರ್ಫ್ಯೂ ವಿಧಿಸಲಾಗಿದೆ.
ಶೃಂಗೇರಿ ದೇವಸ್ಥಾನ, ಗಾಂಧಿ ಮೈದಾನ, ಪ್ಯಾರಲ್ ರಸ್ತೆ ಹಾಗೂ ವಾಹನ ನಿಲುಗಡೆ ಸ್ಥಳಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸ್ಥಳೀಯ ನಿವಾಸಿಗಳು, ಪ್ರವಾಸಿಗರು ಮತ್ತು ವಾಹನಗಳ ಸಂಚಾರವನ್ನು ಸಹ ನಿರ್ಬಂಧಿಸಲಾಗಿದೆ. ಅಂಗಡಿಗಳನ್ನು ತೆರೆಯದಂತೆ ಸೂಚಿಸಲಾಗಿದೆ.