ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಅವರು ಭಾನುವಾರ (ಆಗಸ್ಟ್ 4) ದೆಹಲಿ ಮೆಟ್ರೋದಲ್ಲಿ ಸಂಚರಿಸಿದರು.
ದೆಹಲಿಯ ಲೋಕ ಕಲ್ಯಾಣ ಮಾರ್ಗದಿಂದ ಎಚ್.ಡಿ.ದೇವೇಗೌಡ ಅವರು ತಮ್ಮ ಪ್ರಯಾಣ ಆರಂಭಿಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ದೆಹಲಿ ಮೆಟ್ರೋ ಸೇವೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಸಂಸತ್ ಅಧಿವೇಶನದ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ದೇವೇಗೌಡ ಅವರು ಶನಿವಾರ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಕ್ಕೆ ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದರು. ಪಿಎಂ ಸಂಗ್ರಹಾಲಯವನ್ನು ಇಷ್ಟು ಸುಸಜ್ಜಿತವಾಗಿ ಮಾಡಿದ್ದಕ್ಕಾಗಿ ಅವರು ನರೇಂದ್ರ ಮೋದಿ ಅವರಿಗೆ ಅಭಿನಂದನೆ ತಿಳಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿದ್ದಾರೆ. ಪಿಎಂ ಸಂಗ್ರಹಾಲಯಕ್ಕೆ ಆಗಮಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ʼʼಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮ್ಯೂಸಿಯಂಗೆ ಭೇಟಿ ನೀಡಿದ್ದಾರೆ ಎನ್ನುವ ವಿಚಾರ ತಿಳಿದು ಬಹಳಷ್ಟು ಸಂತಸವಾಯ್ತುʼʼ ಎಂದು ಮೋದಿ ತಿಳಿಸಿದ್ದಾರೆ.