ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಮತ್ತು ಸುಂದರ್‌ಬಾನಿ ಸೆಕ್ಟರ್‌ಗಳ ಗಡಿ ನಿಯಂತ್ರಣ ರೇಖೆ ಬಳಿ ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಸೋಮವಾರ ಗುಂಡಿನ ಕಾಳಗ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಡಿಯುದ್ದಕ್ಕೂ ನುಸುಳುಕೋರರ ಎರಡು ಗುಂಪುಗಳ ಚಲನವಲನವನ್ನು ಗಮನಿಸಿದ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ಎರಡೂ ಪ್ರದೇಶಗಳಲ್ಲಿ ಇದೀಗ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಂದು ಮುಂಜಾನೆ 1.30 ರ ಸುಮಾರಿಗೆ ಜಮ್ಮುವಿನ ಹೊರವಲಯದಲ್ಲಿರುವ ಅಖ್ನೂರ್‌ನ ಬತ್ತಲ್ ಸೆಕ್ಟರ್‌ನಲ್ಲಿ ಮೂರರಿಂದ ನಾಲ್ಕು ನುಸುಳುಕೋರರ ಅನುಮಾನಾಸ್ಪದ ಚಲನವಲನವನ್ನು ಪತ್ತೆಹಚ್ಚಿದ ನಂತರ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ್ದವು ಎಂದು ತಿಳಿಸಿದ್ದಾರೆ.
ನುಸುಳುಕೋರರು ಪತ್ತೆಯಾದ ಬೆನ್ನಲ್ಲೇ ಸ್ಥಳದಲ್ಲಿ ಡ್ರೋನ್‌ಗಳ ಮೂಲಕ ಕಣ್ಗಾವಲು ಹೆಚ್ಚಿಸಲಾಗಿದೆ.