ಬೃಹತ್‌ ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಸಿದ್ದರಾಮಯ್ಯ ಅಭಿಮಾನಿ!

ಹೊಸದಿಗಂತ ಕಲಬುರಗಿ:

ಮುಡಾ ಹಗರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯನ್ನು ವಿರೋಧಿಸಿ ಕಲಬುರಗಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸಿದ್ದರಾಮಯ್ಯ ಅಭಿಮಾನಿಯೊರ್ವ ಮೈಮೇಲೆ ಡಿಸೇಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕರ್ನಾಟಕ ಶೋಷಿತ ಸಮುದಾಯ ಒಕ್ಕೂಟ, ಹಿಂದುಳಿದಿದ ಜಾತಿಗಳ ಒಕ್ಕೂಟ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ನಗರದ ಸರ್ಧಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಹಾಗೂ ಜಗತ್ ವೃತ್ತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಉಭಯ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಯೋರ್ವ ಮೈಮೇಲೆ ಡೀಸೆಲ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸ್ಥಳದಲ್ಲೆ ಇದ್ದ ಪೋಲಿಸರು ಹಾಗೂ ಪ್ರತಿಭಟನಾನಿರತರು ಯುವಕರನ್ನು ತಡೆದಿದ್ದಾರೆ. ಇನ್ನೂ ಡಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾನಿರತರನ್ನು ಪೋಲಿಸರು ತಡೆದಿದ್ದಾರೆ. ಈ ವೇಳೆ ಪೋಲಿಸರು ಹಾಗೂ ಪ್ರತಿಭಟನಾನಿರತರ ನಡುವೆ ನುಕುನೂಗಲ್ಲು ಉಂಟಾಗಿದೆ. ಅಹಿಂದ ನಾಯಕ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಮಾಡಲಾಗ್ತಿದೆ. ಕ್ಲಿನ್‌ಹ್ಯಾಂಡ್ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಬಿಜೆಪಿ-ಜೆಡಿಎಸ್ ಪ್ಲ್ಯಾನ್ ಮಾಡುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು, ಅಹಿಂದ ಹೋರಾಟಗಾರರು, ದಲಿತ ಮುಖಂಡರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!