ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ದುಷ್ಕರ್ಮಿಗಳು ಬಾಂಗ್ಲಾದೇಶದಲ್ಲಿ ದೇವಾಲಯಗಳ ಮೇಲೆ ದಾಳಿ ಮಾಡಿ ವಿರೂಪಗೊಳಿಸಿದ್ದಾರೆ. ಜೊತೆಗೆ ಭಾರತದ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದಾರೆ.
ಸೋಮವಾರದ ಹಿಂಸಾಚಾರದಲ್ಲಿ ನಾಲ್ಕು ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮತ್ತು ಸಮುದಾಯದ ಮುಖಂಡರು ತಿಳಿಸಿದ್ದಾರೆ.
ಹಿಂದೂ, ಬೌದ್ಧ ಮತ್ತು ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್‌ನ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ಕನಿಷ್ಠ ನಾಲ್ಕು ದೇವಾಲಯಗಳಿಗೆ ಹಾನಿಯಾಗಿದೆ ಎಂದು ಹೇಳಿದರು. ಶೇಖ್ ಹಸೀನಾ ಅವರ ಪತನದ ನಂತರದ ಉದ್ವಿಗ್ನ ಪರಿಸ್ಥಿತಿಯನ್ನು ಗಮನಿಸಿದರೆ ಹಿಂದೂ ಸಮುದಾಯದ ಕೆಲವು ಮುಖಂಡರು ಭಯಭೀತರಾಗಿದ್ದಾರೆ ಎಂದು ಅವರು ಹೇಳಿದರು.