ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೇ ವೇಳೆ ದೇವಸ್ಥಾನವೊಂದರಲ್ಲಿ ನಟ ದರ್ಶನ್ ಚಿತ್ರಕ್ಕೆ ಪೂಜೆ ಸಲ್ಲಿಸಿದ ಅರ್ಚಕರನ್ನು ಅಮಾನತು ಮಾಡಲಾಗಿದೆ.
ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕರು ನಟ ದರ್ಶನ್ ಚಿತ್ರವನ್ನ ಇಟ್ಟು ಮಂಗಳಾರತಿ ಮಾಡಿ ಪೂಜೆ ಮಾಡಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕ ಹನುಮಂತಪ್ಪ ಅವರು ದೇವಸ್ಥಾನದ ಸಂಪ್ರದಾಯಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಲ್ಲಿ ಅವರನ್ನು ಅಮಾನತುಗೊಳಿಸಿದ್ದಾರೆ.