ಇಂದಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಜಮೆ ಆಗಿರಲಿಲ್ಲ. ಇಂದಿನಿಂದ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ.

ಮಂಡ್ಯದ ಜನಾಂದೋಲನದಲ್ಲಿ ಮಾತನಾಡಿದ ಅವರು, ನಿನ್ನೆ ಡಿಸಿಎಂ ಭಾಷಣ ಮಾಡುವಾಗ ಗೃಹಲಕ್ಮಿ ಹಣ ಬಂದಿಲ್ಲ ಎಂದು ಮಹಿಳೆಯರು ಹೇಳಿದ್ದರು. ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ. ಇಂದಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆಯಾಗಲಿದೆ. ನುಡಿದಂತೆ ನಡೆಯುವವರು ಕಾಂಗ್ರೆಸ್‌ನವರು. ನಮಗೆ ಸಿಕ್ಕ ಅಧಿಕಾರದಲ್ಲಿ ಜನರಿಗೆ ಒಳ್ಳೆಯದು ಮಾಡುತ್ತೇವೆ. ಬರಗಾಲದಲ್ಲಿ ಪರಿಹಾರ ಕೊಡಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ಆದರೆ ಬಿಜೆಪಿ ಭ್ರಷ್ಟ ಸರ್ಕಾರ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಕಿಡಿಕಾರಿದರು.

ಕರ್ನಾಟಕ ಜನತೆ ಬಿಜೆಪಿ ಭ್ರಷ್ಟಾಚಾರ ಕಂಡಿದೆ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಕೆಡವಿದ ಬಿಜೆಪಿ ಜೊತೆ ಕುಮಾರಣ್ಣ ರಾಜಕಾರಣ ಮಾಡ್ತಿದ್ದಾರೆ. ಇದರ ನಡುವೆ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಜೀರೋ ಸಿಕ್ಕಿದ್ದು, ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ಅನ್ಯಾಯಯವಾಗಿದೆ. ಇದೀಗ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಬಿಜೆಪಿ-ಜೆಡಿಎಸ್ ಗಿಮಿಕ್ ಮಾಡುತ್ತಿದ್ದಾರೆ. ಕ್ಲೀನ್ ಇಮೇಜ್ ಹಾಳು ಮಾಡಲು ಮುಡಾ ಹಗರಣ ಸಿದ್ದರಾಮಯ್ಯ ತಲೆಗೆ ಕಟ್ಟಲು ಯತ್ನಿಸುತ್ತಿದೆ. ಬಿಜೆಪಿ ಸರ್ಕಾರದಲ್ಲಾದ ಹಗರಣಗಳನ್ನು ಕರ್ನಾಟಕದ ಜನ ಮರೆತಿಲ್ಲ ಎಂದು ಹರಿಹಾಯ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!