ಲೂಟಿ ಹೊಡೆಯಲು ಸರ್ಕಾರವೇ ಒತ್ತಡ ಹಾಕುತ್ತಿದೆ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್‌ ರಾವ್

ಹೊಸದಿಗಂತ ವರದಿ, ಚಿತ್ರದುರ್ಗ

ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಅಧಿಕಾರಿಗಳಿಗೆ ಒತ್ತಡ ಹೇರುತ್ತಿದೆ. ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲ ಆಗುತ್ತಿದೆ. ಪೊಲೀಸರಿಗೆ ರಕ್ಷಣೆ ಕೊಡುವ ಸ್ಥಿತಿ ನಿರ್ಮಾಣ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್‌ರಾವ್ ಕಿಡಿಕಾರಿದರು.

ನಗರದ ಹೂರವಲಯದ ಕ್ಯಾದಿಗೆರೆ ಸಮೀಪ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರಕ್ಷಕರನ್ನು ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂಪಾಯಿ ಕೊಡುವವರೆಗೂ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭೀಕಾರಿಗಳಾಗಿದ್ದಾರೆ. ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಪೊಲೀಸ್ ಇಲಾಖೆ ಸಂಪೂರ್ಣ ವೀಕ್ ಆಗುತ್ತಿದೆ. ಪೊಲೀಸರಿಗೆ ರಕ್ಷಣೆ ಕೊಡುವ ಸ್ಥಿತಿ ನಿರ್ಮಾಣ ಆಗಿದೆ ಪ್ರಾಮಣಿಕತೆ ಇರುವುದರಿಂದ ಪರಶುರಾಮ್ ಆತ್ಮಹತ್ಯೆ ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ಹಣ ಕೊಡಬೇಕು ಎಂದು ದೂರಿದರು.

ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಕೊಡಬೇಕಿದೆಜನಪ್ರತಿನಿಧಿಗಳು, ಹೋಂ ಮಿನಿಸ್ಟರ್, ಚೀಫ್ ಮಿನಿಸ್ಟರ್ ಗೆ ಹಣ ಕೊಡಬೇಕು. ಸ್ಟ್ರಾಂಗ್ ಚೀಫ್ ಮಿನಿಸ್ಟರ್ ಇದ್ದರೆ ಈರೀತಿ ಆಗಲ್ಲವೀಕ್ ಚೀಫ್‌ಮಿನಿಸ್ಟರ್ ಇದ್ದಾಗ ಈರೀತಿ ಆಗುತ್ತದೆ ಎಂಎಲ್‌ಎ ಗಳಿಗೆ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಯಚೂರಿನಲ್ಲಿ ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅಲ್ಲಿನ ಶಾಸಕ ಹಾಗೂ ಮಗ ೩೦ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!